
ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದ ಘರ್ಡಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ನೌಕರರು ಸಜೀವ ದಹನಗೊಂಡಿರುವ ಘಟನೆ ನಡೆದಿದೆ.
ಕೆಮಿಕಲ್ ಫ್ಯಾಕ್ಟರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಫ್ಯಾಕ್ಟರಿ ತುಂಬೆಲ್ಲ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಧಾವಿಸಿರುವ 10ಕ್ಕೂ ಹೆಚ್ಚು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಘಟನೆ ವೇಳೆ 50ಕ್ಕೂ ಹೆಚ್ಚು ಜನರು ಪ್ಲಾಂಟ್ ನಲ್ಲಿದ್ದರು. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ