ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊಯ್ನಾ ಜಲಾನಯನದ ಪ್ರದೇಶದಲ್ಲಿ ಲಘು ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆಯು 2.9 ರಷ್ಟು ದಾಖಲಾಗಿದೆ.
ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯ ಪ್ರದೇಶದಲ್ಲಿ ಬೆಳಿಗ್ಗೆ 10.22 ಕ್ಕೆ ಭೂಮಿ ಕಂಪಿಸಿದೆ. ಭೂ ಕಂಪನದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಸಾಧ್ಯತೆ ಇದೆ.
ಸದ್ಯ ಕೃಷ್ಣಾ ನದಿಗೆ 96 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹೆಚ್ಚುವರಿಯಾಗಿ 10 ಸಾವಿರ ಕ್ಯುಸೆಕ್ ನೀರು ಹೊರಬಿಡುವ ಸಾಧ್ಯತೆ ಇದ್ದು, ಇದು ಅಂತಹ ಅಪಾಯವನ್ನೇನು ಉಂಟು ಮಾಡುವುದಿಲ್ಲ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹೊರಬಿಟ್ಟರೆ ಅಪಾಯವಾಗಲಿದೆ.
ಕೊಯ್ನಾ ಜಲಾಶಯದಿಂದ ಇಂದು ಬಿಟ್ಟಿರುವ ನೀರು ಕರ್ನಾಟಕ ರಾಜ್ಯದ ಕೃಷ್ಣಾ ನದಿಗೆ ಮೂರ್ನಾಲ್ಕು ದಿನಗಳ ಬಳಿಕ ಸೇರಿಕೊಳ್ಳಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ