ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂದಿನ 72 ಗಂಟೆಗಳಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಹರಾಷ್ಟ್ರದ ಹಲವೆಡೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದ ಕೊಲ್ಲಾಪುರ, ನಾಸಿಕ್, ಪುಣೆ, ಮುಂಬೈ ಸೇರಿದಂತೆ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಳೆದ 42 ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ವರುಣಾರ್ಭಟಕ್ಕೆ 84 ಜನರು ಸಾವನ್ನಪ್ಪಿದ್ದಾರೆ.
ನಾಸಿಕ್ ನಲ್ಲಿ ಗೋದಾವರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. ದೇವಾಲಯಗಳು, ಮನೆಗಳು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಇದೇ ವೇಳೆ ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಮುಂದಿನ 72 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಕಟ್ಟೆಚ್ಚರ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅತಿವೃಷ್ಟಿ: ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರವಿದೆ: ಸಿಎಂ ಭರವಸೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ