
ಪ್ರಗತಿವಾಹಿನಿ ಸುದ್ದಿ; ಮುಂಬೈ: ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ನಾಲ್ವರು ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ.
ಇಲ್ಲಿನ ಮುಂಬ್ರಾದಲ್ಲಿರುವ ಕೌಸಾದ ಪ್ರೈಂ ಕ್ರಿಟಿಕೆರ್ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳು ಇರಲಿಲ್ಲ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ನಾಲ್ಕು ರೋಗಿಗಳು ಸಾವನ್ನಪ್ಪಿದ್ದರು. ಹಲವರ ಸ್ಥಿತಿ ಗಂಭೀರವಾಗಿದೆ.
ಆಸ್ಪತ್ರೆಯಲ್ಲಿ 20 ಒಳ ರೋಗಿಗಳಿದ್ದರು. ಅವರಲ್ಲಿ ನಲವರು ರೋಗಿಗಳು ಸಾವನ್ನಪ್ಪಿದ್ದು, ಉಳಿದವರನ್ನು ಬೇರೆಆಶ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಘಟನೆ ಬಗ್ಗೆ ವರದಿ ಕೇಳಿರುವ ಸಿಎಂ ಉದ್ಧವ್ ಠಾಕ್ರೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಕೊರೊನಾ ಅಟ್ಟಹಾಸದ ನಡುವೆಯೇ ಪ್ರಭಲ ಭೂಕಂಪ