
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಮತಯಂತ್ರದಲ್ಲಿ ಭದ್ರಗೊಳಿಸಿದ್ದಾರೆ.
ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಮಹಾರಾಷ್ಟ್ರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.58.22ರಷ್ಟು ಮತದಾನವಾಗಿದೆ. ಜಾರ್ಖಂಡ್ ನಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.59ರಷ್ಟು ಮತದಾನವಾಗಿದೆ.
ಮಹಾರಾಷ್ಟ್ರದಲ್ಲಿ ಎಲ್ಲಾ 288 ಕ್ಷೇತ್ರಗಳಿಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಿತು. ಜಾರ್ಖಂಡ್ ನಲ್ಲಿ ಇಂದು 2ನೇ ಹಂತದಲ್ಲಿ 38 ಕ್ಷೇತ್ರಗಳಿಗೆ ಮತದಾನ ನಡೆಯಿತು. ಎರಡೂ ರಾಜ್ಯಗಳಲ್ಲಿ ಬಹುತೇಕ ಶಾಂತಿಯುತ ಮತದಾನವಾಗಿದೆ ಎಂದು ತಿಳಿದುಬಂದಿದೆ.