Election NewsNational

*ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಎರಡೂ ರಾಜ್ಯಗಳ ಚುನವಣಾ ದಿನಾಂಕ ಘೋಷಿಸಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್, ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದರು.

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಜಾರ್ಖಂಡ್ ನ 81 ಕ್ಷೇತ್ರಗಳಿಗೆ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ ನವೆಂಬರ್ 13ರಂದು ಮತದಾನ ನಡೆಯಲಿದ್ದು, ಎರಡನೇ ಹಂತದಲ್ಲಿ ನವೆಂಬರ್ 21ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button