ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಮೂರನೆ ದಿನವಾದ ಇಂದು ಕೂಡ ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿದೆ.
ಸಧ್ಯ ಕರ್ನಾಟಕದ ಗಡಿ ಭಾಗ ನಿಪ್ಪಾಣಿವರೆಗೆ ಮಾತ್ರ ಬಸ್ ಗಳು ಹೋಗುತ್ತಿವೆ. ಮಹಾರಾಷ್ಟ್ರದ ಬಸ್ ನಿಲ್ದಾಣದ ನಿಯಂತ್ರಾಣಿಧಿಕಾರಿ ಸೂಚನೆ ಹಾಗೂ ಪರಿಸ್ಥಿತಿಯನ್ನು ನೋಡಿಕೊಂಡು ಬಸ್ ಕಾರ್ಯಾಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಶಿವಸೇನೆ ಕಾರ್ಯಕರ್ತರು ಕೊಲ್ಹಾಪುರದಲ್ಲಿ ಅಂಗಡಿ ಮುಂಗಟುಗಳ ಮೇಲೆ ಹಾಕಲಾಗಿದ್ದ ಕನ್ನಡ ನಾಮಫಲಕಗಳಿಗೆ ಮಸಿ ಬಳಿದು, ಕನ್ನಡ ನಾಮಫಲಕ ಹಾಕಿದರೆ ವ್ಯಾಪಾರಕ್ಕೆ ಅಡ್ಡಿಪಡಿಸುವುದಾಗಿ ಎಚ್ಚರಿಸಿದ್ದರು. ಇದರ ಬೆನ್ನಲ್ಲೇ ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಮರಾಠಿ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೇ ಶಿವಸೇನೆ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ