Kannada NewsKarnataka NewsNational

*ಹಿರಿಯ ರಂಗಕರ್ಮಿ ನ. ರತ್ನ ಇನ್ನಿಲ್ಲ: ಮೈಸೂರಿನಲ್ಲಿ ಅಂತ್ಯಕ್ರಿಯೆ* 

ಪ್ರಗತಿವಾಹಿನಿ ಸುದ್ದಿ : ಹಿರಿಯ ರಂಗಕರ್ಮಿ ಹಾಗೂ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಮಾಜಿ ನಿರ್ದೇಶಕ ನ. ರತ್ನ ಇಂದು ನಿಧನರಾಗಿದ್ದಾರೆ.

ಮೈಸೂರಿನಲ್ಲಿ ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ನಿರಂತರವಾಗಿ  50 ವರ್ಷಗಳವರೆಗೆ ನಡೆಸಿಕೊಂಡು ಬಂದ ನ.ರತ್ನ, ಅನೇಕ  ನಾಟಕಗಳೊಂದಿಗೆ ರಂಗ ಭೂಮಿಯಲ್ಲಿ ತನ್ನದೇ ಆದ ಸೇವೆ ಸಲ್ಲಿಸಿದ ನ. ರತ್ನ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

Home add -Advt

ನ. ರತ್ನ ಅವರಿಗೆ 89 ವರ್ಷ ವಯಸ್ಸಾಗಿತ್ತು, ಅವರಿಗೆ ಪುತ್ರ ಅಜಿತ್,‌ ಪುತ್ರಿ ಕವಿತಾರತ್ನ ಇದ್ದಾರೆ. ಅವರು ರಚಿಸಿದ ‘ಶಾಂತಿ ಕುಟೀರ’ ನಾಟಕ ಈಚೆಗೆ ಮೈಸೂರಿನಲ್ಲಿ ಪ್ರದರ್ಶನಗೊಂಡಿತ್ತು.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಇಂದು ನಡೆಯಲಿದೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.

Related Articles

Back to top button