
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಎಂಇಎಸ್ ಪುಂಡರು ಕೆ.ಎಸ್.ಆರ್.ಟಿ. ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಳಗಾವಿ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಸಂಚಾರ ಸ್ಥಗಿತಗೊಂಡಿದೆ. ಮಹಾರಾಷ್ಟ್ರದಿಂದ ಬರುವ ಬಸ್ ಗಳನ್ನು ಬೆಳಗಾವಿಯ ಗಡಿ ಭಾಗದಲ್ಲಿಯೇ ನಿಲುಗಡೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಇನ್ನು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ. ಎಂದಿನಂತೆ ಸಂಚರಿಸುತ್ತಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ