ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ 3 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಸರ್ಕಾರ ಲಾಕ್ ಡೌನ್ ಘೋಷಿಸಿದೆ.
ಅಮರಾವತಿಯಲ್ಲಿ ಇಂದು ರಾತ್ರಿ 8ಗಂಟೆಯಿಂದ ಫೆ.28ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಅಕೋಲಾ, ಬುಲ್ದಾನಾ ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪ್ರಮುಖ ನಗರ ಪುಣೆಯಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಮತ್ತು ಕೋಚಿಂಗ್ ಸೆಂಟರ್ ಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಅಲ್ಲದೇ ನೈಟ್ ಕರ್ಫ್ಯೂ ಜಾರಿ ಮಾಡಲು ತೀರ್ಮಾನಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ