Kannada NewsLatestNational

*ಕಾರ್ಖಾನೆಯಲ್ಲಿ ಸ್ಫೋಟ; 9 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ನಾಗ್ಪುರ: ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ 9 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ನಾಗ್ಪುರದ ಬಜಾರ್ ಗಾಂವ್ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್ ನಲ್ಲಿ ಈ ದುರಂತ ಸಂಭವಿಸಿದೆ. 9 ಜನರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಕಲ್ಲಿದ್ದಲು ಸ್ಫೋಟಕ್ಕಾಗಿ ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳನ್ನು ಮತ್ತು ಇತರ ಸಾಧನಗಳನ್ನು ಪೂರೈಸುತ್ತದೆ. ಈ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button