ಪ್ರಗತಿವಾಹಿನಿ ಸುದ್ದಿ: ಸಾಲು ಸಾಲು ಅಪಘಾತ ಪ್ರಕರಣಗಳು ವರದಿಯಾಗುತ್ತಿವೆ. ಟೆಂಪೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಬಳಿ ನಡೆದಿದೆ.
ಕನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದಲ್ಲಿ ಬ್ಬಿಣದ ರಾಡ್ ಗಳನ್ನು ಸಾಗಿಸುತ್ತಿದ್ದ ಲಾರಿ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟೆಂಪೋದಲ್ಲಿ 16 ಜನರು ಇದ್ದರು. ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ