ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಿಎಂ ಶಿಂಧೆ ಗುಡ್ ನ್ಯೂಸ್ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 5 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ ಗೆ 3 ರೂಪಾಯಿ ಕಡಿತ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.
ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ, ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತ; ವಾಹನ ಸಂಚಾರ ಸ್ಥಗಿತ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ