Election NewsNationalPolitics

*ಸಾಂಗೋಲಾ ಕ್ಷೇತ್ರದಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಬಿರುಸಿನ ಪ್ರಚಾರ*

ಪ್ರಗತಿವಾಹಿನಿ ಸುದ್ದಿ: ಸಾಂಗೋಲಾ ಪಟ್ಟಣದಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆ, ಮಹಾರಾಷ್ಟ್ರ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಜಿ ಅವರ ನೇತೃತ್ವದಲ್ಲಿ ನಡೆದ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಯಾದ ಶಹಾಜಿಬಾಪು ರಾಜಾರಾಮ ಪಾಟೀಲ ಅವರ ಪ್ರಚಾರರ್ಥವಾಗಿ ನಡೆದ ಕಾರ್ಯಕರ್ತರ ಬೃಹತ್ ಬಹಿರಂಗ ಸಮಾವೇಶದಲ್ಲಿ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಭಾಗವಹಿಸಿ ಮಾತನಾಡಿದರು.

ಸಾಂಗೊಲಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಹಾಜಿಬಾಪು ಅವರಿಗೆ ತಮ್ಮ ಅಮೂಲ್ಯ ಮತವನ್ನು ನೀಡಿ, ಬಹುಮತದಿಂದ ಗೆಲ್ಲಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಪ್ರಶಾಂತ ಪಾರಿಚಾರಕ ರಾಣಿತಾಯಿ ಮಾನೆ, ರಾಜಶ್ರೀ ದತ್ತಾತ್ರೇಯ ನಗನೆಪಾಟೀಲ ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button