*19 ವರ್ಷದ ಯುವಕನಿಂದ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ವೈರಲ್*

ಪ್ರಗತಿವಾಹಿನಿ ಸುದ್ದಿ: 19 ವರ್ಷದ ಯುವಕನೊಬ್ಬ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಆತನ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ವೈರಲ್ ಆಗಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಪರತ್ವಾಡದಲ್ಲಿ ನಡೆದಿರುವ ಈ ಘಟನ್ರೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. 19 ವರ್ಷದ ಅಯಾನ್ ಅಹ್ಮದ್ ತನ್ವೀರ್ ಎಂಬ ಯುವಕ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಪೊಲೀಸರು ಪ್ರಕರಣದ ತನಿಖೆ ನಡೆಸಿದಾಗ ಆರೋಪಿಯ ಬಳಿ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಅಯಾನ್ ಅಹ್ಮದ್ ತನ್ವೀರ್ ಮೂಲತಃ ಅಮರಾವತಿಯ ಪರತ್ವಾಡ ನಿವಾಸಿ. ಈ ಗಂಭೀರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಸ್ಥಳೀಯ ಹಿಂದೂ ಸಂಘಟನೆಗಳು ಪರತ್ವಾಡದಲ್ಲಿ ತೀವ್ರ ಪ್ರತಿಭಟನೆ ನಡೆಸಿ, ಬಂದ್ಗೆ ಕರೆ ನೀಡಿವೆ.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಹಗೂ ಕಠಿಣ ಕ್ರಮದ ಭಾಗವಾಗಿ ಸ್ಥಳೀಯ ಆಡಳಿತವು ಆರೋಪಿಯ ಮನೆಯನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಿದೆ. ಪೊಲೀಸರು ಅಯಾನ್ ಅಹ್ಮದ್ ತನ್ವೀರ್‌ನನ್ನು ಬಂಧಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಮುಂಜಾಗೃತಾ ಕ್ರಮವಾಗಿ ಪರತ್ವಾಡದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.



