*ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಓರ್ವ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಬದ್ಲಾಪುರದಲ್ಲಿ ನಡೆದಿದೆ. ಬದ್ಲಾಪುರದ ಎಂಐಡಿಸಿಯಲ್ಲಿರುವ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಕಾರ್ಖಾನೆಯ ತುಂಬೆಲ್ಲ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಕಾರ್ಖಾನೆ ಬಳಿ ನಿಲ್ಲಿಸಿದ್ದ ವಾಹನಗಲು ಬೆಂಕಿಗಾಹುತಿಯಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆಯ ಕೆಮಿಕಲ್ ವಿಭಗದ ಒಂದು ಬದಿಯಲ್ಲಿ ಹೊತ್ತಿಕೊಮ್ಡ ಬೆಂಕಿ ಇಡೀ ಕಾರ್ಖಾನೆಗೆ ವ್ಯಾಪಿಸಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. Home add … Continue reading *ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಓರ್ವ ಸಜೀವ ದಹನ*