Latest

ಮಹಾರಾಷ್ಟ್ರ : ರೈಲಿನಲ್ಲೇ ಸಿಲುಕಿದ 6,000 ಪ್ರಯಾಣಿಕರು; ಆಹಾರ, ನೀರು ಪೂರೈಕೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಿಂದಾಗಿ ರೈಲು ಸಂಚಾರ ಸ್ಥಗಿತಗೊಂಡಿದ್ದು, ಮಾರ್ಗ ಮಧ್ಯೆಯೇ ರೈಲಿನಲ್ಲೇ 6 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಹಾರಾಷ್ಟ್ರದ ಹಲವೆಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಕೊಂಕಣ ರೈಲು ಮಾರ್ಗದ ವಿವಿಧ ನಿಲ್ದಾಣಗಳಲ್ಲಿ ರೈಲು ಸಂಚಾರ ಬಂದ್ ಆಗಿದ್ದು, ರೈಲುಗಳಲ್ಲೆ 6000 ಪ್ರಯಾಣಿಕರು ಸಿಲುಕಿಕೊಳ್ಳುವಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ 9 ರೈಲುಗಳನ್ನು ಸ್ಥಗಿತಗೊಳಿಸಲಾಗಿದ್ದು, ರೈಲಿನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರು ಸುರಕ್ಶಿತವಾಗಿದ್ದು, ಪ್ರಯಾಣಿಕರಿಗೆ ಆಹಾರ, ನೀರು ಹಾಗೂ ಅಗತ್ಯವಸ್ತುಗಳನ್ನು ಪೂರೈಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ಕೊಂಕಣ ಪ್ರದೇಶದ ರತ್ನಗಿರಿ ಹಾಗೂ ರಾಯಗಡ್ ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಗೋಟುರ ನಾಗನೂರ ಸೇತುವೆ ಮುಳುಗಡೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button