ಭಾರಿ ಮಳೆಯಿಂದ ಕೃಷ್ಣಾನದಿಯಲ್ಲಿ ಹೆಚ್ಚಿದ ಒಳಹರಿವು; ಚಿಕ್ಕೋಡಿ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ನಿರಂತರ ಮಳೆಯಿಂದಾಗಿ ಕೃಷ್ಣಾ ನದಿ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.
ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಕೃಷ್ಣಾನದಿಯಲ್ಲಿ ಒಳಹರಿವು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಹಲವು ಗ್ರಾಮಗಳ ರೈತರು ಪ್ರವಾಹದ ಆತಂಕಕ್ಕೆ ಸಿಲುಕಿದ್ದಾರೆ. ಮಾಂಜರಿ, ಯಡೂರು, ಕಲ್ಲೋಳ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣಾವಾಗಿದೆ.
ಇನ್ನೊಂದೆಡೆ ಮಹಾರಾಷ್ಟ್ರ-ಗೋವಾ ಮಾರ್ಗದಲ್ಲಿರುವ ಅಂಬೊಲಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಸಾವಿರಾರು ಪ್ರವಾಸಿಗರು ಜಲಪಾತ ನೋಡಲು ಧಾವಿಸಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ, ಕೇರಳ, ಗುಜರಾತ್, ಛತ್ತೀಸಗಢ, ರಾಜಸ್ಥಾನ ರಾಜ್ಯಗಳಲ್ಲಿ ಮಳೆಯಾಗುತ್ತಿದ್ದು, ಅಸ್ಸಾಂ, ಉತ್ತರಾಖಂಡ, ಹಿಮಾಚಲಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹವುಂಟಾಗುತ್ತಿದೆ.
ಪ್ರವಾಹದ ಅಬ್ಬರಕ್ಕೆ ನದಿಯಲ್ಲಿ ಕೊಚ್ಚಿ ಹೋದ ಕಾರು; 9 ಜನರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ