Kannada NewsLatestNational

*ಭೀಕರ ಅಪಘಾತ: ಸ್ಥಳದಲ್ಲಿಯೇ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ ನಾಥ್ ಪಟ್ಟಣದ ಫ್ಲೈ ಓವರ್ ಮೇಲೆ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹಲವು ಬೈಕ್ ಗಳಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಓರ್ವ ಬೈಕ್ ಸವಾರ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದಿದ್ದಾನೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button