Kannada NewsKarnataka NewsLatestPolitics

*ಮಹೇಶ ಶೆಟ್ಟಿ ತಿಮರೋಡಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿ, ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ನಿನ್ನೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅದರಂತೆ 196(1), 352, 353(2) ಬಿಎನ್ಎಸ್ ಅಡಿಯಲ್ಲಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಇಂದು ಇದೇ ಪ್ರಕರಣ ಸಂಬಂಧ ಬ್ರಹ್ಮಾವರ ಪೊಲೀಸರು ಉಜಿರೆಯ ಮನೆಯಿಂದ ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬರುತ್ತಿದ್ದಾರೆ.

ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೊ ಮಾಡಿ ಮಹೇಶ್ ಶೆಟ್ಟಿ ತಿಮರೋಡಿ ಸಂತೋಷ್ ಅವರನ್ನು ಅವಹೇಳನ ಮಾಡಿ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್‌ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ನಾನ್ ಬೇಲೇಬಲ್ ಪ್ರಕರಣ ದಾಖಲಾಗಿದ್ದು ನಮ್ಮ 2 ನೊಟೀಸ್ ಗೂ ಪ್ರತಿಕ್ರಿಯೆ ನೀಡಿಲ್ಲ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. 

Home add -Advt

ಸದ್ಯ ತಿಮರೋಡಿಯನ್ನು ಉಜಿರೆಯ ಮನೆಯಿಂದ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

Related Articles

Back to top button