Kannada NewsKarnataka NewsLatest

*BREAKING: ಮಹೇಶ್ ತಿಮರೋಡಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಬಂಧಿತ ಮಹೇಶ್ ತಿಮರೋಡಿಯನ್ನು ಬ್ರಹ್ಮಾವರ ತಾಲೂಕು ಸಂಚಾರಿ ಪೀಠದ ಮುಂದೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ಮಹೇಶ್ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧಕ್ಕೆ ನೀಡಿ ಆದೇಶ ಹೊರಡಿಸಿದೆ.

ಇದೇ ವೇಳೆ ಮಹೇಶ್ ತಿಮರೋಡಿ ಜಾಮಿನು ಅರ್ಜಿ ವಿಚಾರಣೆಯನ್ನು ಆ.23ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button