Kannada NewsKarnataka NewsLatest

*ಮಹೇಶ್ ತಿಮರೋಡಿ ಮನೆ ಮೇಲೆ SIT ದಾಳಿ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಹಲವು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದು, ಇದೀಗ ಹೋರಾಟಗಾರ ಮಹೇಶ್ ತಿಮರೋಡಿಗೂ ಬುರುಡೆ ಸಂಕಷ್ಟ ಎದುರಾಗಿದೆ.

ಎಸ್ ಐಟಿ ಅಧಿಕಾರಿಗಳು ಮಹೇಶ್ ತಿಮರೋಡಿ ಅವರ ಉಜಿರೆಯಲ್ಲಿರುವ ಎರದು ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಮಹೇಶ್ ತಿಮರೋಡಿ ನಿವಾಸದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಸೇರಿದ ಮೊಲ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಅಲ್ಲದೇ ತಿಮರೋಡಿ ಮನೆಗೆ ಆತ ಬಂದು ಹೋಗುತ್ತಿರುವ ಬಗ್ಗೆ ಸಿಸಿಟಿವಿ ದೃಶ್ಯಗಳು ಪತ್ತೆಯಾಗಿವೆ. ಈ ಬೆಳವಣಿಗೆ ಬೆನ್ನಲ್ಲೇ ಧರ್ಮಸ್ಥಳ ಪ್ರಕರಣದ ತನಿಖೆ ಮಹತ್ವದ ತಿರುವು ಪಡೆಯುತ್ತಿದೆ.

ಮಹೇಶ್ ತಿಮರೋಡಿ ನಿವಾಸದಲ್ಲಿ ಎಸ್ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

Home add -Advt

Related Articles

Back to top button