
ಪ್ರಗತಿವಾಹಿನಿ ಸುದ್ದಿ: ಕೋಮು ಪ್ರಚೋದನೆ ಆರೋಪದಡಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗಡೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಬಳಸಿ ಕೋಮು ಪ್ರಚೋದನೆ ಆರೋಪದಡಿ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಮೂಡಬಿದರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ರೆಡ್ಡಿ ಆದೇಶದಂತೆ ಕೇಸ್ ದಾಖಲಾಗಿತ್ತು. ಮೂಡಬಿದರೆ ಪಿಎಸ್ ಐ ಕೃಷ್ಣಪ್ಪ ದೂರಿನನ್ವಯ ಎಫ್ ಐ ಆರ್ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಮಹೇಶ್ ವಿಕ್ರಂ ಹೆಗಡೆಯವರನ್ನು ಬಂಧಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ಸೋಮವಾರದವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.