*ಮಹಿಳಾ ಮಂಡಳ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದಲ್ಲಿ ಘಟಸ್ಥಾಪನೆ ಹಾಗೂ ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಶ್ರೀ ಲಕ್ಷ್ಮೀ ಮಹಿಳಾ ಮಂಡಳವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಉದ್ಘಾಟಿಸಿದರು. ಹಿಂದೂ ಸಂಪ್ರದಾಯದ ಪ್ರಕಾರ ನವರಾತ್ರಿ ಹಬ್ಬಕ್ಕೆ ಬಹಳ ಮಹತ್ವವಿದ್ದು, ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ದೊರಕಿದ್ದು ಖುಷಿ ತಂದಿದೆ. ಈ ಸಂದರ್ಭದಲ್ಲಿ ಉದ್ಘಾಟನೆಗೊಂಡಿರುವ ಮಹಿಳಾ ಮಂಡಳಿ ಸಮಾಜಮುಖಿ ಕಾರ್ಯ ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಸವದತ್ತಿ … Continue reading *ಮಹಿಳಾ ಮಂಡಳ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*