*ಮಹಿಷ ದಸರಾ ಆಚರಣೆಗೆ ಪೊಲೀಸ್ ಬಂದೋಬಸ್ತ್; ಚಾಮುಂಡಿ ಬೆಟ್ಟಕ್ಕೆ ಇಂದು ಭಕ್ತರಿಗೆ ಪ್ರವೇಶ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ತೀವ್ರ ವಿರೋಧದ ನಡಿವೆಯೂ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಮಾಡಲಾಗುತ್ತಿದ್ದು, ಇನ್ನೊಂದೆದೆ ಮಹಿಷ ದಸರಾ ವಿರೋಧಿಸಿ ಚಾಮುಂಡಿ ಚಲೋ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಾಮುಂಡಿ ಬೆಟ್ಟ ಹಾಗೂ ಪುರಭವನದಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈಗಾಗಲೇ ಮಹಿಷ ದಸರಾ ಸಮಿತಿಯಿಂದ ಮಹಿಷ ದಸರಾ ಅಚರಣೆ ಆರಂಭವಾಗಿದ್ದು, ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ತಪಾಸಣೆ ನಡೆಸಲಾಗಿದೆ.
ಮಹಿಷ ದಸರಾ, ಚಾಮುಂಡಿ ಚಲೋ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ನವರಾತ್ರಿ, ದಸರಾ ಸಂದರ್ಭದಲ್ಲಿ ಭಕ್ತರಿಗೆ ನಿರ್ಬಂಧ ವಿಧಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಇನ್ನು ಮೈಸೂರು ನಗರದಾದ್ಯಂತ ನಾಳೆ ಬೆಳಿಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಇರಲಿದ್ದು, ಪೊಲೀಸ್ ಕಣ್ಗಾವಲು ಇರಿಸಲಾಗಿದೆ. ಯಾವುದೇ ಸಭೆ, ಸಮಾರಂಭ ನಡೆಸದಂತೆ ಹಾಗೂ ಒಂದೇ ಸ್ಥಳದಲ್ಲಿ 5ಕ್ಕಿಂತ ಹೆಚ್ಚಿನ ಜನ ಸೇರದಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ