Kannada NewsKarnataka NewsNationalPolitics
*ಮತ್ತೆ ಆಸ್ಪತ್ರೆಗೆ ದಾಖಲಾದ ಎಲ್ ಕೆ ಅಡ್ವಾಣಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವಾರವಷ್ಟೇ ಅಡ್ವಾಣಿಯವರು ಆಸ್ಪತ್ರೆಗೆ ದಾಖಲಾಗಿ ಗುಣಮುಖರಾದ ನಂತರ ಡಿಸ್ಚಾರ್ಜ್ ಆಗಿದ್ದರು, ಇದೀಗ ಅವರ ಆರೋಗ್ಯದಲ್ಲಿ ದಿಢೀರನೆ ಏರುಪೇರು ಕಂಡು ಬಂದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ ಕೆ ಅಡ್ವಾಣಿ ಅವರಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಡಾ. ವಿನೀತ್ ಸೂರಿ ಅಡ್ವಾಣಿಯವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.




