*ನಿಗಮ-ಮಂಡಳಿಗಳಲ್ಲಿ ಮಹತ್ವದ ಬದಲಾವಣೆ*: *ಈ ಸದಸ್ಯರಿಗೆ ಕೊಕ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ. ನಾಮನಿರ್ದೇಶನದ ಮೂಲಕ ಸದಸ್ಯರು ಮತ್ತು ನಿರ್ದೇಶಕರಾಗಿ ನೇಮಕಗೊಂಡು ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿರುವವರನ್ನು ಸೇವೆಯಿಂದ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಸೋಮವಾರ ಈ ಕುರಿತು ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ. … Continue reading *ನಿಗಮ-ಮಂಡಳಿಗಳಲ್ಲಿ ಮಹತ್ವದ ಬದಲಾವಣೆ*: *ಈ ಸದಸ್ಯರಿಗೆ ಕೊಕ್*