
ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 200 ಕ್ಕೂ ರೋಗಿಗಳನ್ನು ಸ್ಥಳಾಂತರಿಸಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿರುವ ಲೋಕ ಬಂಧು ರಾಜ್ ನಾರಾಯಣ್ ಸಂಯೋಜಿತ ಆಸ್ಪತ್ರೆಯಲ್ಲಿ ನಡೆದಿದೆ.
ಬೆಂಕಿ ಅವಘಡ ಸಂಭದ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶದ ಡಿಸಿಎಂ ಬ್ರಜೇಶ್ ಪಾಠಕ್, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಮತ್ತು ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದಿದ್ದಾರೆ.
ಸುಮಾರು 200 ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆ ಕಟ್ಟಡದ ಎರಡನೇ ಮಹಡಿಯಲ್ಲಿ ಮೊದಲು ಹೊಗೆ ಕಾಣಿಸಿಕೊಂಡು ಆತಂಕದ ವಾತಾವರಣ ಉಂಟು ಮಾಡಿತು ಎಂದು ತಿಳಿಸಿದ್ದಾರೆ.
ರೋಗಿಗಳನ್ನು ಸ್ಥಳಾಂತರಿಸುವಾಗ ಓರ್ವ ದಾರಿಯಲ್ಲಿ ಸಾವನ್ನಪ್ಪಿದ್ದಾನೆ. ಆದರೆ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಆಸ್ಪತ್ರೆ ನಿರ್ದೇಶಕ ರಾಜೇಶ್ ಶ್ರೀವಾಸ್ತವ ತಿಳಿಸಿದ್ದಾರೆ.