*ಚಿಕ್ಕೋಡಿ ಪೊಲೀಸರ ಕಾರ್ಯಾಚರಣೆ: ಟ್ರ್ಯಾಕ್ಟರ್, ಟ್ರೈಲರ್ ಕಳ್ಳರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೆಯ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಕಳ್ಳತನ ಪ್ರಕರಣವನ್ನು ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಕಳ್ಳತನವಾಗಿದ್ದ ವಾಹನಗಳನ್ನು ವಶಕ್ಕೆ ಪಡೆದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪ್ರಭಾಕರ ತೇಲಿ, ಮಬುಸಾಬ್ ಅಂಕಲಗಿ ಹಾಗೂ ನದಿಮ ಅಮ್ಮಣಗಿ ಎಂದು ಗುರುತಿಸಲಾಗಿದೆ.
ಮನೆಯ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಕಳ್ಳತನವಾಗಿದ್ದು, ಟ್ರ್ಯಾಕ್ಟರ್ನ ಅಂದಾಜು ಮೌಲ್ಯ ₹3.15 ಲಕ್ಷ, ಟ್ರೇಲರ್ನ ಮೌಲ್ಯ ₹1.70 ಲಕ್ಷ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ನಡೆಸಿದ ಚಿಕ್ಕೋಡಿ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ, ಕಳ್ಳತನವಾಗಿದ್ದ ಎರಡೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಇದೇ ವೇಳೆ ಮತ್ತೊಂದು ಕಳ್ಳತನ ಪ್ರಕರಣದಲ್ಲೂ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಕಳ್ಳತನವಾಗಿದ್ದ ಅಶೋಕ್ ಲೇಲ್ಯಾಂಡ್ ವಾಹನವನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಇದರ ಅಂದಾಜು ಮೌಲ್ಯ ₹35 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕೋಡಿ ಠಾಣೆಯ ಪೊಲೀಸರು ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಬಂಧಿತ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



