Latest

*5 ಗ್ಯಾರಂಟಿ ಯೋಜನೆಗಳು ಇಂದೇ ಜಾರಿ; ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಇಂದೇ ಜಾರಿಗೆ ತರುವುದಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಕಾರ್ಯಕರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಜನರ ಆಶಿರ್ವಾದದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾಡಿನ ರೈತರು, ಕಾರ್ಮಿಕರು, ಯುವಕರು, ಮಹಿಳೆಯರು ಎಲ್ಲ ಜನರಿಗೂ ಧನ್ಯವಾದಗಳು. ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿ ನಮಗೆ ಶುಭ ಕೋರಿರುವ ಎಲ್ಲಾ ಗಣ್ಯರಿಗೂ ಧನ್ಯವಾದಗಳು. ರಾಜ್ಯದ ಜನರ ನಿರೀಕ್ಷೆಯಂತೆ ನಾವು ಆಡಳಿತ ನಡೆಸುತ್ತೇವೆ, ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.

ಜನರಿಗೆ ನಾವು ನೀಡಿದ್ದ ಭರವಸೆಗಳನ್ನು ಈಡೇರಿಸುತ್ತೇವೆ. ಇಂದೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.

https://pragati.taskdun.com/siddaramaiahd-k-shivakumarsatish-jarakiholioath/

Home add -Advt

Related Articles

Back to top button