Latest

ನಾಡಿನ ಜನತೆಗೆ ಸಂಕ್ರಾಂತಿ ಶುಭ ಸಂದೇಶ ಕೋರಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಸಂಕ್ರಾಂತಿ ಸಂಭ್ರಮ ಮನೆ ಮಾಡಿದ್ದು, ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಕರ ಸಂಕ್ರಮಣದ ಶುಭಾಷಯ ಕೋರಿದ್ದಾರೆ.

ಟ್ವೀಟ್ ಮೂಲಕ ಶುಭ ಕೋರಿರುವ ಸಿಎಂ ಯಡಿಯೂರಪ್ಪ, ನಾಡಿಗೆ ಆವರಿಸಿರುವ ಸಾಂಕ್ರಾಮಿಕದ ಕರಿಛಾಯೆ ದೂರಸರಿಯಲಿ, ಸಂತಸ, ಸಮೃದ್ಧಿಗಳ ಹೊಂಗಿರಣ ಎಲ್ಲೆಡೆ ಪಸರಿಸಲಿ. ಈ ಸುಗ್ಗಿಕಾಲವು ಎಲ್ಲರಿಗೂ ಆರೋಗ್ಯ, ಯಶಸ್ಸು, ನಲಿವುಗಳನ್ನು, ವಿಶೇಷವಾಗಿ ಅನ್ನದಾತ ರೈತನಿಗೆ ನೆಮ್ಮದಿಯನ್ನು ಹೊತ್ತು ತರಲಿ, ನಾಡು ಪ್ರಗತಿ ಪಥದಲ್ಲಿ ಮುನ್ನಡೆಯಲಿ. ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

 

Home add -Advt

Related Articles

Back to top button