ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಚಂದರಗಿಯ ಕ್ರೀಡಾ ವಸತಿ ಶಾಲೆಯನ್ನು ಅಭಿವೃದ್ಧಿ ಮಾಡಿ, ಕ್ರೀಡಾ ವಿಶ್ವವಿದ್ಯಾಲಯವನ್ನಾಗಿ ಉನ್ನತೀಕರಣಗೊಳಿಸುವಂತೆ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರ ನಿವಾಸಕ್ಕೆ ಗುರುವಾರ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ, ಬೆಳಗಾವಿ ಜಿಲ್ಲೆಯ ಚಂದರಗಿ ಕ್ರೀಡಾ ವಸತಿ ಶಾಲೆಯನ್ನು ಅಭಿವೃದ್ಧಿಪಡಿಸಿ ಕ್ರೀಡಾ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸುವಂತೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ನಾರಾಯಣಸ್ವಾಮಿ, ಜಯಸಿದ್ದೇಶ್ವರ ಸ್ವಾಮೀಜಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ