Kannada NewsKarnataka NewsLatest

*ಮಲೆಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಪ್ರಸಿದ್ಧ ದೇವಾಲಯ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ದೇವಾಲಯದ ಲಾಡು ತಯಾರಿಸುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಸಮಯದಲ್ಲೇ ಘಟಕದಲ್ಲಿ ಬೆಂಕಿ ಹೊತ್ತಿ ಉರಿದಿದೆ. 10-12 ಜನ ಸಿಬ್ಬಂದಿಗಳು ಲಾಡು ತಯಾರಿಸುತ್ತಿದ್ದರು. ಈ ವೇಳೆ ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ.

ಘಟನೆ ಸಂಭವಿಸುತ್ತಿದ್ದಂತೆ ಸಿಬ್ಬಂದಿಗಳು ಕಟ್ಟಡದಿಂದ ಹೊರಗೊಡಿ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button