
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ 3ನೇ ಹೆಚ್ಚುವರಿ ನ್ಯಾಯಾಲಯ ಅಂಗಿಕರಿಸಿದೆ.
ಮಳಲಿ ಮಸೀದಿ ದೇವಸ್ಥಾನದ ಮಾದರಿಯಲ್ಲಿದ್ದು, ಅದರಲ್ಲಿ ಕೆಲ ಹಿಂದೂ ದೇವರ ಪ್ರತಿಮೆಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಮಸೀದಿ ಸರ್ವೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ವಿ ಹೆಚ್ ಪಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತಲ್ಲದೇ, ಮಸೀದಿಯಲ್ಲಿ ನಡೆಯುತ್ತಿದ್ದ ಕಾಮಗಾರಿಗೂ ತಡೆಯಾಜ್ಞೆ ತಂದಿತ್ತು. ಆದರೆ ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಿ, ವಿಹೆಚ್ ಪಿ ಅರ್ಜಿ ವಜಾಗೊಳಿಸುವಂತೆ ಮಸೀದಿ ಆಡಳಿತ ಮಂಡಳಿ ಮಂಗಳೂರು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಕೋರ್ಟ್ ಕಮಿಷನರ್ ನೇಮಕ ಮಾಡಿ ಮಸೀದಿ ಸರ್ವೆ ನಡೆಸುವಂತೆ ವಿ ಹೆಚ್ ಪಿ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿದ್ದು, ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.
ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದೆ.
https://pragati.taskdun.com/politics/7th-pay-commissioncm-basavaraj-bommaisudhakar-rao/