Film & EntertainmentKannada NewsKarnataka NewsLatest

*ನೆಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ನಟಿ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಮಲಯಾಳಂ ನ ಖ್ಯಾತ ನಟಿ ಅಪರ್ಣಾ ನಾಯರ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಲಯಾಳಂ ಚಿತ್ರರಂಗ ಹಾಗೂ ಕಿರುತೆರೆ ಲೋಕಕ್ಕೆ ಆಘಾತವಾಗಿದೆ.

ಮಲಯಾಳಂ ಸಿನಿಮಾ ಹಾಗೂ ಧಾರಾವಾಹಿ ಎರಡರಲ್ಲಿಯೂ ಅಪರ್ಣಾ ನಾಯರ್ ಸಕ್ರಿಯರಾಗಿದ್ದರು. ಇದೀಗ ಇದ್ದಕ್ಕಿದ್ದಂತೆ ಅವರು ಶವವಾಗಿ ಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

31 ವರ್ಷದ ಅಪರ್ಣಾ ನಾಯರ್ ತಿರುವನಂತಪುರಂ ನಲ್ಲಿ ವಾಸವಾಗಿದ್ದರು. ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿಯೇ ಅವರು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಈ ದುರಂತ ಸಂಭವಿಸಿದೆ. ತಕ್ಷಣ ಅವರ ತಾಯಿ ಹಾಗೂ ಸಹೋದರಿ ಅಪರ್ಣಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರಾದರೂ ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

Home add -Advt

ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button