Latest

*ಭಾರಿ ಭೂಕುಸಿತ; 8 ಜನರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಕೌಲಾಲಂಪುರ: ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ 8 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಘಟನೆ ಮಲೇಷ್ಯಾದಲ್ಲಿ ಸಂಭವಿಸಿದೆ.

ಕೌಲಾಲಂಪುರ ಹೊರವಲಯದಲ್ಲಿರುವ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ್ದು, ಪರಿಹಾರ ಹಾಗು ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ.

ಕ್ಯಾಂಪ್ ಸೈಟ್ ಬಳಿ ಭೂಕುಸಿತ ಸಂಭವಿಸಿದ್ದು, 8 ಜನರು ಬಲಿಯಾಗಿದ್ದು, 50 ಜನರು ನಾಪತ್ತೆಯಾಗಿದ್ದಾರೆ. ಈವರೆಗೆ 31 ಜನರನ್ನು ರಕ್ಷಿಸಿ ಬೇರೆಡೆ ಸ್ಥಳಾಂತರಿಸಲಾಗಿದೆ. ಸುಮಾರು 30 ಮೀಟರ್ ಎತ್ತರದಿಂದ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

*ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

https://pragati.taskdun.com/karnatakarain2daysimd/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button