*BREAKING: ಅಧಿಕಾರ ಹಂಚಿಕೆ ಕುರಿತು ಮಹತ್ವದ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಅಧಿಕಾರ ಹಂಚಿಕೆ ಕುರಿತ ಚರ್ಚೆ ಜೋರಾಗಿರುವ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದರು. ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ಖರ್ಗೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಕರೆದು ಮಾತುಕತೆ ನಡೆಸಿದ್ದಾರೆ. ಇಂದು ದೆಹಲಿಗೆ ಹಿಂತಿರುಗುತ್ತಿರುವ ಅವರು ಕೆಲ ಮಹತ್ವದ ಹೇಳಿಕೆ ನೀಡಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಜೊತೆ ಕುಳಿತು ಚರ್ಚಿಸಲಾಗುವುದು. ಸಿಎಂ, ಡಿಸಿಎಂ ಸೇರಿದಂತೆ ನಾಲ್ಕು ನಾಯಕರನ್ನು ಕರೆದು ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಹೈಕಮಂಡ್ ಏಕಾಂಗಿಯಲ್ಲ. ಅದು ಒಂದು ತಂಡ. ಹೈಕಮಾಂಡ್ ನಾಯಕರೊಟ್ಟಿಗೆ ಕುಳಿತು ಚರ್ಚಿಸಲಾಗುವುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ನಾಲ್ಕು ನಾಯಕರನ್ನು ದೆಹಲಿಗೆ ಕರೆದು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆ ನೋಡೋಣ ಎಂದು ಹೇಳಿದರು.




