Latest

*ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ ಮಲ್ಲಿಕಾರ್ಜುನ ಖರ್ಗೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ‘ಮೋದಿ ವಿಷದ ಹಾವು ಇದ್ದಂತೆ’ ಎಂಬ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ವಿಷಾದ ವ್ಯಕ್ತಪಡಿಸಿರುವ ಮಲ್ಲಿಕಾರ್ಜುನ ಖರ್ಗೆ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ. ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಂಡು ನೋವಾಗಿದ್ರೆ ವಿಷಾದ ಎಂದು ತಿಳಿಸಿದ್ದಾರೆ.

ಬಿಜೆಪಿ-ಕಾಂಗ್ರೆಸ್ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಆರ್ ಎಸ್ ಎಸ್ – ಬಿಜೆಪಿ ಸಿದ್ಧಾಂತ ವಿಷಕಾರಿಯಾಗಿದೆ. ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ. ಯಾವುದೇ ವ್ಯಕ್ತಿ ಬಗ್ಗೆ ಮಾತನಾಡುವುದಾಗಲಿ ಅಥವಾ ಯಾರಿಗೂ ನೋವುಂಟು ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗದಗದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆಯವರು, ಮೋದಿ ವಿಷದ ಹಾವು ಇದ್ದಂತೆ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಹೇಳಿದ್ದರು. ಖರ್ಗೆ ಹೇಳಿಕೆ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು.

Home add -Advt
https://pragati.taskdun.com/mallikarjuna-khargepm-narendra-modipoisones-snakegadaga/

Related Articles

Back to top button