Kannada NewsKarnataka NewsLatestPolitics

*ಎಐಸಿಸಿ‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ; ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಎಐಸಿಸಿ‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಕೋರಿದರು.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಜನ್ಮದಿನದ ಶುಭಾಷಯ ತಿಳಿಸಿದರು.

Home add -Advt

ಈ ವೇಳೆ ಮಾತನಾಡಿದ ಸಚಿವರು, ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಕೋರಿದ್ದೇನೆ. ಕಾಂಗ್ರೆಸ್ ಪಕ್ಷಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುವ ಖರ್ಗೆ ಅವರಿಗೆ ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿಕೊಳ್ಳುವೆ ಎಂದು ತಿಳಿಸಿದರು.


Related Articles

Back to top button