Latest

*ಸಿಎಂ ಯಾರಾಗಲಿದ್ದಾರೆ?: ಖರ್ಗೆ ಖಡಕ್ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಅದು ನನಗೆ ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಹುದ್ದೆ ರೇಸ್ ನಲ್ಲಿ ನಾನಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿ ಕೆಲ ದಿನಗಳಿಂದ ಸಿಎಂ ಹುದ್ದೆಗೆ ಯಾರೆಲ್ಲ ಸಮರ್ಥರಿದ್ದಾರೆ ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಕೋಲಾರದಲ್ಲಿ ನಡೆಯುತ್ತಿರುವ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಪರೋಕ್ಷ ವಾರ್ನಿಂಗ್ ಕೊಟ್ಟಿದ್ದಾರೆ.

Related Articles

ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ, ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಅದು ನನಗೆ ಬೇಡ. ಮೊದಲು ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಖಡಕ್ ಆಗಿ ತಿಳಿಸಿದರು.

ಮೊದಲು ಪಕ್ಷ ಅಧಿಕಾರಕ್ಕೆ ಬರಲಿ, ನಂತರ ಮುಖ್ಯಮಂತ್ರಿ ಬಗ್ಗೆ ಶಾಸಕರು ನಿರ್ಧಾರ ಮಾಡುತ್ತಾರೆ. ಈಗಲೇ ಆ ಬಗ್ಗೆ ಚರ್ಚೆ ಬೇಡ ಎಂದು ಹೇಳಿದರು. ಈ ಮೂಲಕ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿರುವ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೂ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

Home add -Advt
https://pragati.taskdun.com/jagadish-shettarreactionb-s-yedyurappastatment/

Related Articles

Back to top button