Latest

ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದ ರಾಜ್ಯಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ರಾಜ್ಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಸೋಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೂ ಬ್ರೇಕ್ ಬೀಳುವ ಸಾಧ್ಯತೆ ದಟ್ಟವಾಗಿದೆ. ಕೋವೀಡ್ ಕೇಸ್ ಹೆಚ್ಚುತ್ತಿರುವುದರಿಂದ ಹೈಕೋರ್ಟ್ ಸೂಚನೆ ಬೆನ್ನಲ್ಲೇ ಪಾದಯಾತ್ರೆ ತಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ನಡುವೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನ ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ, ಹೆಚ್.ಎಂ ರೇವಣ್ಣ ಸೇರಿದಂತೆ ಅನೇಕರಿಗೆ ಕೊರೊನಾ ಸೋಂಕು ತಗುಲಿದೆ. ಇದೀಗ ಪಾದಯಾತ್ರೆಗೆ ಚಾಲನೆ ನೀಡಿದ್ದ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದ್ದು, ಹೋಂ ಐಸೋಲೇಷನ್ ಆಗಿದ್ದಾರೆ.

ಇದೇ ವೇಳೆ ಖರ್ಗೆ ಅವರ ದೆಹಲಿಯ ಕಚೇರಿಯ ಮೂವರು ಸಿಬ್ಬಂದಿಗಳಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button