Latest

*ಗರಿಗೆದರಿದ ರಾಜಕೀಯ: ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸರಣಿ ಸಭೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ನಾಯಕರು ಸರಣಿ ಸಭೆ ನಡೆಸಿದ್ದಾರೆ.

ಪಕ್ಷಕ್ಕೆ ಬಹುಮತ ಬಂದರೆ ಸರ್ಕಾರ ರಚನೆ ವಿಚಾರ ನಿಟ್ಟಿನಲ್ಲಿ ಹಾಗೂ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆ ನಿಟ್ಟಿನಲ್ಲಿ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ರಾಜ್ಯ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ.

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸದಾಶಿವನಗರದ ಖರ್ಗೆ ನಿವಾಸಕ್ಕೆ ತೆರಳಿದ್ದು, ಮಹತ್ವದ ಸಭೆ ನಡೆಸಿದ್ದಾರೆ.

ಒಂದೊಮ್ಮೆ ಅತಂತ್ರ ಫಲಿತಾಂಶ ಬಂದರೂ ತಕ್ಷಣ ಕೈಗೊಲ್ಳಬೇಕಿರುವ ರಣತಂತ್ರದ ಬಗ್ಗೆಯೂ ಮೀಟಿಂಗ್ ನಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

Home add -Advt
https://pragati.taskdun.com/d-k-shivakumarpressmeetelection-result/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button