ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದ್ದಕ್ಕಿದ್ದಂತೆ ಅಸ್ವಸ್ಥರಾದ ಘಟನೆ ನಡೆದಿದೆ.
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಅಕ್ಟೋಬರ್ 1ರಂದು ನಡೆಯಲಿರುವ ಕೊನೇ ಹಂತದ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದೆ. ಕಥುವಾದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ ನಡೆಸಿದೆ.
ಈ ವೇಳೆ ಚುನಾವಣಾ ಪ್ರಚಾರದ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಏಕಾಏಕಿ ಅಸ್ವಸ್ಥರಾಗಿದ್ದಾರೆ. ತಕ್ಷಣ ವೇದಿಕೆಯಲ್ಲಿದ್ದ ನಾಯಕರು ಅವರನ್ನು ಹಿಡಿದುಕೊಂಡಿದ್ದಾರೆ. ನೀರನ್ನು ಕುಡಿದು ಸಾವರಿಸಿಕೊಂಡ ಖರ್ಗೆ ಮತ್ತೆ ಮಾತನಾಡಲು ಪ್ರಯತ್ನಿಸಿದರು. ಆಗಲೂ ಸಾಧ್ಯವಾಗಲಿಲ್ಲ. ಬಳಿಕ ಸಾವರಿಸಿಕೊಂಡು ಕುರ್ಚಿಯಲ್ಲಿ ಕುಳಿತು ಭಾಷಣ ಮುಂದುವರೆಸಿದರು.
ನಿರಂತರ ಪ್ರಯಾಣದಿಂದಾದ ಆಯಾಸದಿಂದಾಗಿ ಮಲ್ಲಿಕಾರ್ಜುನ ಖರ್ಗೆಯವರು ಬಳಿಕ ಹರ್ಯಾಣದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ