Cancer Hospital 2
Beereshwara 36
LaxmiTai 5

*AICC ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಆರಂಭ*

Anvekar 3

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿ ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ಆರಂಭವಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಡಾ.ಜಿ.ಪರಮೇಶ್ವರ್, ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಬಿ.ನಾಗೇಂದ್ರ, ಕೆ.ಜೆ.ಜಾರ್ಜ್, ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

Emergency Service

ಕಾಂಗ್ರೆಸ್ ನ ಹಲವು ಶಾಸಕರು ಸಚಿವರುಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದ ಬೆನ್ನಲ್ಲೇ ಹೈಕಮಾಂಡ್ ನೇತೃತ್ವದಲ್ಲಿ ನಡೆದಿರುವ ಕಾಂಗ್ರೆಸ್ ರಾಜ್ಯ ನಾಯಕರ ಸಭೆ ತೀವ್ರ ಕುತೂಹಲ ಮೂಡಿಸಿದೆ.


Bottom Add3
Bottom Ad 2