
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ನೂತನ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸಕ್ಕೆ ನೂತನ ಶಾಸಕರ ದಂಡೇ ಆಗಮಿಸಿದೆ. ಶಾಸಕರಾದ ಜಮೀರ್ ಅಹ್ಮದ್, ಹೆಚ್.ಕೆ.ಪಾಟೀಲ್, ಆರ್.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಶಾಸಕರು ಆಗಮಿಸಿದ್ದಾರೆ.
ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಯಾರಾಗಬೇಕು ಎಂಬ ಬಗ್ಗೆ ಆಯ್ಕೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ