Kannada NewsLatestNationalPolitics

*ಪ್ರಧಾನಿ ನರೇಂದ್ರ ಮೋದಿ ಓರ್ವ ಭಯೋತ್ಪಾದಕ: ವಿವಾದಾತ್ಮಕ ಹೇಳಿಕೆ ನೀಡಿದ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಓರ್ವ ಟೆರರಿಸ್ಟ್ ಎಂದು ಹೇಳಿಕೆ ನೀಡುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಓರ್ವ ಭಯೋತ್ಪಾದಕ. ವಿಧಾನಸಭಾ ಚುನಾವಣೆಯಲ್ಲಿ ಅವರೊಂದಿಗೆ ಎಐಎಡಿಎಂಕೆ ಮೈತ್ರಿ ಮಾಡಿಕೊಂಡಿದ್ದು ಏಕೆಂದು ತಿಳಿಯುತ್ತಿಲ್ಲ ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ವಿರೋಧಿಗಳನ್ನು ಬೆದರಿಸುತ್ತಾರೆ ಮತ್ತು ಭಯಪಡಿಸುತ್ತಾರೆ. ಅವರೊಬ್ಬ ಭಯೋತ್ಪಾದಕ. ಅಣ್ಣಾದೊರೈ ಅವರ ಫೋಟೋ ಹಾಕುವ ಈ ಎಐಎಡಿಎಂಕೆ ಜನರು ಮೋದಿಯೊಂದಿಗೆ ಹೇಗೆ ಕೈಜೋಡಿಸುತ್ತಾರೆ? ಎಐಎಡಿಎಂಕೆ ಮೋದಿಯೊಂದಿಗೆ ಹೇಗೆ ಕೈ ಜೋಡಿಸಿದರು? ಅವರೊಬ್ಬ ಭಯೋತ್ಪಾದಕ. ಅವರು ಸಮಾನತೆಯನ್ನು ನಂಬುವುದಿಲ್ಲ. ಅವರ ಪಕ್ಷವೆಂದೂ ಸಮಾನತೆ ಮತ್ತು ನ್ಯಾಯವನ್ನು ನಂಬುವುದಿಲ್ಲ. ಅಂತಹ ಬಿಜೆಪಿಯೊಂದಿಗೆ ಎಐಎಡಿಎಂಕೆ ಸೇರುತ್ತಿದೆ. ಅಂದರೆ ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ ಎಂದು ಹೇಳಿದ್ದಾರೆ.

ಖರ್ಗೆ ಅವರ ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button