Latest

*ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ?; ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕರ್ನಾಟಕದಲ್ಲಿ ಲಂಚ ಕೊಡದೇ ಇಂದು ಯಾವುದೇ ಕೆಲಸ ಆಗುವುದಿಲ್ಲ ಅಂತಹ ಸ್ಥಿತಿ ಬಂದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಭ್ರಷ್ಟಾಚಾರದಿಂದಾಗಿ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದೆ. 40% ಕಮಿಷನ್ ಬಗ್ಗೆ ಗುತ್ತಿಗೆದಾರರು ಆರೋಪ ಮಾಡಿದ್ದರು. ಪ್ರಧಾನಿ ಮೋದಿ, ರಾಷ್ಟ್ರಪತಿಗೂ ಪತ್ರ ಬರೆದು ದೂರಿದ್ದರು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ಪ್ರಶ್ನಿಸಿದರು.

Home add -Advt

ಈ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನ ನಿರ್ಧರಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

https://pragati.taskdun.com/vidhanasabha-electiondogsaysnext-cmh-d-kumaraswamy/

Related Articles

Back to top button