*ರಾಜ್ಯಸಭಾ ಚುನಾವಣೆ ಹಿನ್ನೆಲೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆಯ್ಕೆಯಾಗಲು ಬಯಸಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ, ಚುನಾವಣಾ ಅಧಿಕಾರಿಯಾಗಿರುವ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಕರ್ನಾಟಕದ 4 ಸ್ಥಾನ ಸೇರಿ 24 ಸ್ಥಾನಗಳಿಗೆ ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, … Continue reading *ರಾಜ್ಯಸಭಾ ಚುನಾವಣೆ ಹಿನ್ನೆಲೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ*