
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಬಗ್ಗೆ ಉಲ್ಲೇಖ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಹಿಂದೂ ವಿರೋಧಿ ಎಂಬ ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ ಅವರು, ರಾತ್ರಿ ಮಟನ್ ತಿಂದು ಬೆಳಿಗ್ಗೆ ನಾನ್ ವೆಜ್ ಅಂತಾ ಬೈತಾರೆ. ಬಿಜೆಪಿ ಜನರ ಭಾವನಾತ್ಮಕ ವಿಚಾರಗಳ ಜೊತೆ ಆಟವಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಜನರ ಮಧ್ಯೆ ಜಗಳ ಹಚ್ಚಿ ವೋಟ್ ಪಡೆಯುವುದು ಸರಿಯಲ್ಲ. ಇಂತಹ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ