Latest

ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ,

Home add -Advt

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಮಲ್ಲಿಖಾರ್ಜುನ ಖರ್ಗೆ ಅವರು, ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷ ಸ್ಥಾನ ಚುನಾವಣೆಗೆ ಸ್ಪರ್ಧಿಸುತ್ತಿದ್ದು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ಕಾಂಗ್ರೆಸ್ ನಿಯಮದಂತೆ ಇದೀಗ ಖರ್ಗೆಯವರು ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಿ.ಪಿಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ; JDS ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿಚಾರ್ಜ್

https://pragati.taskdun.com/latest/ramanagarac-p-yogeshwarcarthroweggjds-workers/

Related Articles

Back to top button